03 May 2010

ಸದ್ದಿಲ್ಲದೆ ಸಾಗುತಿದೆ ಮತ್ತೊಂದು ಆಕ್ರಮಣಪಥ...ಸುಮಾರು ಹತ್ತು ದಿನಗಳ ಹಿಂದೆ ಪತ್ರಿಕೆಯೊಂದರ ಅಂಕಣಬರಹವೊಂದರಲ್ಲಿ (vk,22 April,'ನೂರೆಂಟು ಮಾತು') ಇಂಥದೊಂದು ಮಾಹಿತಿ ಓದಿ ನಿಜಕ್ಕೂ ದಂಗಾಗಿ ಹೋಯ್ತು.ಈ ವಿಚಾರ ಕೇಳಿದ್ರೆ ನಿಮ್ಗೂ ಆಶ್ಚರ್ಯವಾದೀತು.
ಇಡೀ ವಿಶ್ವವನ್ನು ಆವರಿಸಿರುವ 'ಚೀನಾದ ಪರಿಣಾಮ'ದ ಕುರಿತಾದ ಲೇಖನ ಅದು. "ಅಮೇರಿಕ,ಯುರೋಪ್,ಆಫ್ರಿಕಾ ಹಾಗೂ ಆಸ್ಟ್ರೇಲಿಯಾದ ಯಾವುದೇ ದೇಶಗಳಿಗೆ ಹೋದ್ರೂ Made in china ಸಾಮನುಗಳದ್ದೇ ಕಾರುಬಾರು. ಗಮನಿಸ್ಬೇಕಾದ ಪ್ರಮುಖ ಸಂಗತಿ ಅಂದ್ರೆ ಭಾರತದ ಎಲ್ಲ ಹಳ್ಳಿ, ಮನೆಗಳನ್ನೂ ಈ Made in china ಸಾಮಾನುಗಳು ಮುಟ್ಟಿವೆ. ಮುಂದಿನ ಹತ್ತು ವರ್ಷಗಳಲ್ಲಿ ಗುಂಡುಸೂಜಿ, ಬಟನ್, ಸಾಕ್ಸ್, ಪೆನ್, ಮಗ್, ರೇಜರ್, ಬ್ಲೇಡ್, ಬಕೆಟ್‌ನಿಂದ ಹಿಡಿದು ನಾವು ಉಪಯೋಗಿಸುವ ಶೇ.65ರಷ್ಟು ವಸ್ತುಗಳು ಚೀನದಲ್ಲಿಯೇ ಉತ್ಪಾದನೆಯಗಲಿದೆ! ಇಷ್ಟೇ ಆಗಿದ್ರೆ ok.ಆದ್ರೆ ನಾವು ನಿತ್ಯ ಪೂಜಿಸೋ ದೇವರ ವಿಗ್ರಹ,ದೇವರ ಫೋಟೋ,ಕುಂಕುಮ,ಅರಿಶಿನ,ದೇವರ ಫೋಟೋಫ್ರೇಮ್,ಗಂಧದ ಮಾಲೆ, ಪ್ಲಾಸ್ಟಿಕ್ ಹೂವು,ಗಂಧ ತೇಯುವ ಕಲ್ಲೂ ಸೇರಿದಂತೆ ಪೂಜಾ ಸಾಮಗ್ರಿಗಳು ಭಾರತಕ್ಕೆ ಚೀನಾದಿಂದ ಬಹಳ ದೊಡ್ಡ ಪ್ರಮಾಣದಲ್ಲಿ ಬರ್ತಾ ಇವೆಯಂತೆ!

ಅಂಕಿ-ಸಂಖ್ಯೆಗಳ ವಿವರದಲ್ಲಿ ಹೇಳೋದಾದ್ರೆ:
ಕಳೆದ ವರ್ಷ ಚೀನಾದ ಯಿವು ಎಂಬ ನಗರದಲ್ಲಿ ತಯಾರಾದ ಎಂಟು ಕೋಟಿ ವಿವಿಧ ಬಗೆಯ ಗಣೇಶನ ವಿಗ್ರಹಗಳು ಭಾರತಕ್ಕೆ ರಫ್ತಾಗಿದೆ.
ಸುಮಾರು ಎರಡು ಕೋಟಿ ಕೃಷ್ಣ,ಹನುಮಂತ,ತಿರುಪತಿ ವೆಂಕಟೇಶ,ಪದ್ಮನಾಭ,ಶಬರಿಮಲೆ ಅಯ್ಯಪ್ಪ ವಿಗ್ರಹಗಳು ಯಿವು ನಗರದಿಂದ ಬಂದಂಥವು.
ನಾವು ಪೂಜಿಸುವ ಈ ವಿಗ್ರಹಗಳ ಪೈಕಿ ಶೇ.55ರಷ್ಟು ಚೀನಾದಲ್ಲಿ ತಯಾರಾದವು!
ಈ ವರ್ಷವೊಂದರಲ್ಲಿಯೇ ಚೀನಾ ಹನ್ನೆರಡು ದಶಲಕ್ಷ ಟನ್ ಕುಂಕುಮವನ್ನು ಭಾರತಕ್ಕೆ ರಫ್ತು ಮಾಡಲಿದೆ.ಈ ಕುಂಕುಮ ಭಾರತದಲ್ಲಿ ಸಿಗುವುದಕ್ಕಿಂತ ಕಡಿಮೆ ಬೆಲೆಗೆ ಸಿಗುತ್ತದೆಯೆಂಬುದನ್ನು ಗಮನಿಸ್ಬೇಕು.
ಕಳೆದ ಮೂರು ವರ್ಷಗಳಲ್ಲಿ ಚೀನಾ ಭಾರತಕ್ಕೆ ಕಳಿಸಿದ ಕರ್ಪೂರ ನಲುವತ್ತೊಂದು ಲಕ್ಷ ಟನ್!
ಈ ವರ್ಷ ಚೀನಾ,ಕನ್ನಡವೂ ಸೇರಿದಂತೆ ಭಾರತದ ಎಲ್ಲ್ಲಾ ಭಾಷೆಗಳಲ್ಲಿ ಮುದ್ರಿಸಿದ ಸುಮಾರು ಮುನ್ನೂರು ಪುಟಗಳನ್ನು ಒಳಗೊಂಡ ನಾಲ್ಕು ಕೋಟಿ 'ಭಗವದ್ಗೀತೆ'ಯ ಪ್ರತಿಗಳನ್ನು ನಮ್ಮಲ್ಲಿಗೆ ಕಳುಹಿಸಲು ನಿರ್ಧರಿಸಿದ್ಯಂತೆ!


ಇದು ಹೀಗೇ ಮುಂದುವರಿದ್ರೆ ಇನ್ನು ಒಂದೆರಡು ವರ್ಷಗಳಲ್ಲಿ ಭಾರತದ ಎಲ್ಲ ದೇಗುಲಗಳಲ್ಲಿನ, ಎಲ್ಲರ ಮನೆ ಪೂಜಾಕೋಣೆಯಲ್ಲಿನ ವಸ್ತುಗಳೆಲ್ಲ Made in China ಆಗೋದು ಖಚಿತ."

"ಅಬ್ಬ ಚೀನಾದ ಸಾಧನೆಯೇ!" ಅಂತ ನಾವು ಮೂಗುಮುರಿದು ಬೆರಗಾಗಿ ಕಣ್‌ಕಣ್ ಬಿಡೋ ಹೊತ್ಗೆ ಚೀನಾ ನಮ್ಮ ಜೀವನದ ಮೂಲವನ್ನು ಅಲುಗಾಡಿಸಿಬಿಟ್ಟಿರುತ್ತೆ. ಖಂಡಿತ ನಾವು ಈಗ ಎಚ್ಚೆತ್ಕೊಳ್ಳೇಬೇಕು. ಇಷ್ಟೊಂದು ದೊಡ್ಡಮಟ್ಟಿನ ವಹಿವಾಟು ಚೀನಾಕ್ಕೆ ಸಿಗ್ಬೇಕಾದ್ರೆ ಅದ್ಕೆ ನಮ್ಮವ್ರೇ ಕಾರಣ ತಾನೆ..? ನಾವು order ಕೊಟ್ರೇನೆ ತಾನೆ ಅವ್ರು ಮಾಡೋದು.. 2020ರ ಹೊತ್ಗೆ ಭಾರತ ನಂಬರ್ ವನ್ ಆಗುತ್ತೇಂತ ಕನಸು ಕಾಣ್ತಾ, ಹಾಯಾಗಿ ನಿದ್ದೆ ಮಾಡ್ತಾ ಇದ್ರೆ 'ವ್ಯಾಪಾರಿ ಆಕ್ರಮಣ'ಗಳು ನಮ್ಮ ಅಂತಃಸ್ಸತ್ವವನ್ನೇ ಕರಗಿಸಿಬಿಡುತ್ವೆ. ನಮ್ಮಲ್ಲಿನ ಸ್ವ-ಉದ್ಯೋಗ, ಗುಡಿಕೈಗಾರಿಕೆಗಳು ಹೇಳಹೆಸರಿಲ್ಲದಂತೆ ಮಾಯವಾಗಿ ಬಿಡುತ್ವೆ. ಮತ್ತೊಮ್ಮೆ ದಾಸ್ಯದ ಬಲೆಗೆ ಸಿಲುಕಿಕೊಳ್ಳೋ ಮೊದ್ಲು ಜಾಗೃತರಾಗೋಣ. ಜಾಗೃತರಾಗ್ಲೇಬೇಕು.. ಅಲ್ವ..?

4 comments:

 1. ಅನು,
  ನೀವು ಹೇಳಿದ್ದು ನಿಜ. 2020ರ ಹೊತ್ಗೆ ಭಾರತ ನಂಬರ್ ವನ್ ಆಗುತ್ತೇಂತ ಕನಸು ಕಾಣ್ತಾ, ಹಾಯಾಗಿ ನಿದ್ದೆ ಮಾಡ್ತಾ ಇದ್ರೆ 'ವ್ಯಾಪಾರಿ ಆಕ್ರಮಣ'ಗಳು ನಮ್ಮ ಅಂತಃಸ್ಸತ್ವವನ್ನೇ ಕರಗಿಸಿಬಿಡುತ್ವೆ.
  ಇಷ್ಟು ಪ್ರಮಾಣದ ಹೇರಗುತ್ತಿಗೆಯನ್ನ ಕೊಟ್ಟದ್ದಾದರೂ ಯಾರು ಎಂಬ ಚಿಂತನೆ ನಿಜವಾಗಿ ಆಗಬೇಕು. ಇಷ್ಟೆಲ್ಲಾ ಆಗುತ್ತಿರೂದು ಸರಕಾರಕ್ಕೆ ತಿಳಿದಿಲ್ಲವೇ? ನಾವುಗಳು, ಇಂತಹ ಉತ್ಪನ್ನಗಳನ್ನು ಎಷ್ಟರಮಟ್ಟಿಗೆ ತಯಾರಿಸುತ್ತಿದ್ದೇವೆ? ಎಂಬಂತಹ ಚಿಂತನೆ ನಮ್ಮಲ್ಲಿ ಮೂಡುವುದು ಬಹಳ ಮುಖ್ಯ.

  AIDS ರೋಗದಂತೆ ನಿಧಾನವಾಗಿ ನಮ್ಮನ್ನು ನಮಗೇ ತಿಳಿಯದಂತೆ ಆಕ್ರಮಿಸಿ ನಮ್ಮ ಒಳಗಿನ ಸತ್ವವನ್ನೆಲ್ಲಾ ಬರಿದುಗೊಳಿಸಿ, ಮುಂದೊಂದುದಿನ ಸಂಪೂರ್ಣವಾಗಿ ದೇಶದ ಆರ್ಥಿಕ ವ್ಯವಸ್ತೆಯನ್ನೇ ಬುಡಮೇಲು ಮಾಡುವುದೇ ಚೀನಾದ marketing (ಕು)ತಂತ್ರ. ಆದರೆ ನಾವು ಒಂದು ಮಾತನ್ನು ಮರೆಯಬಾರದು. ಭಾರತದ ಆರ್ಥಿಕತೆ ಅಷ್ಟು ಸುಲಭದಲ್ಲಿ ಸಾಯುವನ್ತಹದ್ದಲ್ಲ ಹಾಗಿದ್ದರೆ. ಅದು ಎಂದೋ ಆಗಬೇಕಿತ್ತು...

  ಕಲ್ಲನ್ನು ಕಲ್ಲಿನಿಂದಲೇ ಹೊಡೆಯಬೇಕು ಕೈ ಕಟ್ಟಿ ಕುಳಿತು ಪ್ರಯೋಜನ ಇಲ್ಲ.. ನೀವು ಹೇಳಿದ್ದು ನಿಜ ಜಾಗೃತಿಯೊಂದೆ ಇದಕ್ಕಿರುವ ಪರಿಹಾರ. one thing we should keep in mind that " if it is to be it is up to us".....

  ಧನ್ಯವಾದ,
  ನಂದ.

  ReplyDelete
 2. Venkataraja BadekkilaMay 5, 2010 at 9:28 PM

  Good article.
  keep it up

  ReplyDelete
 3. Iam thrilled to hear that there a voice blog that too in beautiful kannada language exists on the net. I appreciate your adventurism. hats off best of luck and regards vijayendra 9448320220

  ReplyDelete